ಯೋಬ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನ ಆ ಮಾತಿಗೆ ಸೈತಾನನು - ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.