Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಕುರುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:7
14 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.


‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.


ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.


ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು