Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಹಾ! ಸದ್ಯಕ್ಕೆ ಸುಖಶಾಂತಿ ನೆಲಸಿಲ್ಲ ಅವರ ಕೈಯಲಿ ಆ ದುರುಳರ ಆಲೋಚನೆ ನನ್ನಿಂದ ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವದಿಲ್ಲ. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:16
13 ತಿಳಿವುಗಳ ಹೋಲಿಕೆ  

ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.


ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು