Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದೇವರಿಗೆ ಜ್ಞಾನವನ್ನು ಉಪದೇಶಿಸಲು ಯಾರಿಂದಲೂ ಆಗದು. ಮೇಲಿನ ಲೋಕದಲ್ಲಿರುವ ಜನರಿಗೂ ಸಹ ದೇವರು ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:22
23 ತಿಳಿವುಗಳ ಹೋಲಿಕೆ  

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?


“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?


ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.


ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.


ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ.


ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?


ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?


ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು