Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:30
22 ತಿಳಿವುಗಳ ಹೋಲಿಕೆ  

ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”


ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,


ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.


ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.


ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.


ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು