Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದುಷ್ಟರ ಮಕ್ಕಳು ತಮ್ಮ ತಂದೆತಾಯಿಗಳೊಂದಿಗಿದ್ದು ಬೆಳೆಯುವರು; ದುಷ್ಟರು ತಮ್ಮ ಮೊಮ್ಮಕ್ಕಳನ್ನೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:8
8 ತಿಳಿವುಗಳ ಹೋಲಿಕೆ  

ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ, ತಂದೆತಾಯಿಗಳು ಮಕ್ಕಳಿಗೆ ಭೂಷಣ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.


ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು