Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಮಾನವನಿಂದ ದೇವರಿಗೇನು ಪ್ರಯೋಜನ? ಬುದ್ಧಿವಂತನಾಗಿ ನಡೆದುಕೊಂಡರೆ ಅದು ಅವನಿಗೇ ಪ್ರಯೋಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೇ ಪ್ರಯೋಜನವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:2
15 ತಿಳಿವುಗಳ ಹೋಲಿಕೆ  

ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.


ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.


ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.


ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು


ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,


ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು