Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಲ್ಲ,ಹಾಗೆಮಾಡುವುದು ನಿನ್ನ ಕೆಟ್ಟತನ ಹೆಚ್ಚಿದುದಕ್ಕಾಗಿ. ನಿನ್ನ ಪಾಪಗಳಿಗೆ ಮಿತಿಯಿಲ್ಲದುದಕ್ಕಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಕೆಟ್ಟತನವು ದೊಡ್ಡದೇ ಸರಿ, ನಿನ್ನ ಪಾಪಗಳಿಗೆ ವಿುತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಪಾಪವು ಅತಿಯಾಯಿತು! ಯೋಬನೇ, ನೀನು ಪಾಪಮಾಡುವುದನ್ನು ನಿಲ್ಲಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ದುಷ್ಟತನವು ಬಹಳವಲ್ಲವೋ? ನಿನ್ನ ಪಾಪಗಳಿಗೆ ಅಂತ್ಯವೇ ಇಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:5
12 ತಿಳಿವುಗಳ ಹೋಲಿಕೆ  

ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.


ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.


ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು