ಯೋಬ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ವಿಧವೆಯರಿಗೆ ದಾನಮಾಡದೆ ಅವರನ್ನು ನೀನು ಕಳುಹಿಸಿಬಿಟ್ಟಿರಬಹುದು. ಒಂದುವೇಳೆ ನೀನು ಅನಾಥರಿಗೆ ಮೋಸಮಾಡಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.