Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ತನ್ನ ಆಲೋಚನೆಗೆ ತಕ್ಕಂತೆ ನನಗೆ ಮಾಡುವನು. ಆತನಲ್ಲಿ ಇಂಥಾ ಸಂಕಲ್ಪಗಳು ಎಷ್ಟೋ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 23:14
12 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.


ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.


ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು