Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸರ್ವಶಕ್ತನು ಏಕೆ [ದಂಡನೆಯ] ಕಾಲಗಳನ್ನು ನೇವಿುಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ [ನ್ಯಾಯ ತೀರ್ಪಿನ] ದಿನಗಳು ಏಕೆ ಗೋಚರವಾಗುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:1
29 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.


ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.


ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.


ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?


ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.


ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು