Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:13
26 ತಿಳಿವುಗಳ ಹೋಲಿಕೆ  

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.


ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.


ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.


ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.


ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು