Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವ್ಯಭಿಚಾರಿ ಸಂಜೆಯನೇ ಎದುರು ನೋಡುತ್ತಿರುತ್ತಾನೆ ಯಾರೂ ತನ್ನನ್ನು ಕಾಣದಂತೆ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜಾರನು ತಾನು ಯಾರ ಕಣ್ಣಿಗೂ ಬೀಳಬಾರದೆಂದು ಸಂಜೆಯನ್ನೆದುರುನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ವ್ಯಭಿಚಾರಿಯು ರಾತ್ರಿಗಾಗಿಯೇ ಕಾಯುತ್ತಿರುತ್ತಾನೆ. ‘ಯಾರ ಕಣ್ಣಿಗೂ ಬೀಳಬಾರದು’ ಎಂದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:15
15 ತಿಳಿವುಗಳ ಹೋಲಿಕೆ  

ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.


ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.


ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.


ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು