Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 25:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 25:4
15 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು