6 ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.
ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.