Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಮನುಷ್ಯನು ಜ್ಞಾನವನ್ನು ಕಂಡುಕೊಳ್ಳುವುದೆಲ್ಲಿ? ವಿವೇಕವು ದೊರೆಯುವ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:12
14 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?


ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.


ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.


ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು