Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಚೊಕ್ಕ ಬಂಗಾರಕೊಟ್ಟು ಅದನು ಕೊಂಡುಕೊಳ್ಳಲಾಗದು ಅದರ ಬೆಲೆಗೆ ಬೆಳ್ಳಿಯನು ತೂಕಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವದು ಅಶಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಇಡೀ ಲೋಕದ ಬೆಳ್ಳಿಯನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:15
8 ತಿಳಿವುಗಳ ಹೋಲಿಕೆ  

ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!


ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು