Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:17
8 ತಿಳಿವುಗಳ ಹೋಲಿಕೆ  

ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.


ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು