Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:12
20 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?


ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?


ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.


ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.


ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.


ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.


ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು