Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:14
16 ತಿಳಿವುಗಳ ಹೋಲಿಕೆ  

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.


ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.


ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.


“ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.


ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು