Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:23
9 ತಿಳಿವುಗಳ ಹೋಲಿಕೆ  

ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.


ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.


ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,


ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.


ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.


ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.


“ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು