Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ ಅದು ನನ್ನ ತಾಯಿಯ ಗರ್ಭದ್ವಾರವನು ನನಗೆ ಮುಚ್ಚಲಿಲ್ಲ ನನ್ನ ಕಣ್ಗಳಿಂದ ದುಃಖದುಗುಡವನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ರಾತ್ರಿಯು ನನ್ನ ತಾಯಿಯ ಗರ್ಭ ದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆ ಮಾಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೆಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:10
12 ತಿಳಿವುಗಳ ಹೋಲಿಕೆ  

ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.


ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.


“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.


ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.


ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು