Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:11
15 ತಿಳಿವುಗಳ ಹೋಲಿಕೆ  

ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.


ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.


ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.


ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?


ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.


ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.


ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು