Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ವಿುಣುಕದೆ ಹೋಗಲಿ, ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ, ಅರುಣೋದಯವೆಂಬ ರೆಪ್ಪೆ ತೆರೆಯುವದನ್ನು ಅದು ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರುನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:9
7 ತಿಳಿವುಗಳ ಹೋಲಿಕೆ  

ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.


ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.


ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು