Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:16
8 ತಿಳಿವುಗಳ ಹೋಲಿಕೆ  

ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.


ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು