Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೂರ್ಖರ ಮಕ್ಕಳು, ನೀಚ ಜಾತಿಯವರು ನಾಡಿನಿಂದ ಹೊರದೂಡಲ್ಪಟ್ಟವರು ಅವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಯೋಗ್ಯರಾಗಿದ್ದ ಈ ಗುಂಪಿನವರು ದೇಶಭ್ರಷ್ಟರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:8
17 ತಿಳಿವುಗಳ ಹೋಲಿಕೆ  

ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.


ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.


“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.


ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.


ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.


ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.


ನಿನ್ನ ಮೇಲೆ ಹೊಲಸನ್ನು ಹಾಕಿ ಮಾನಕಳೆದು ನಿನ್ನನ್ನು ಎಲ್ಲರೂ ಪರಿಹಾಸ್ಯ ಮಾಡುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು