Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:23
15 ತಿಳಿವುಗಳ ಹೋಲಿಕೆ  

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು