Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅನ್ಯಾಯಗಾರರಿಗೆ ವಿಪತ್ತನ್ನೂ ಕೆಡುಕರಿಗೆ ಉಪದ್ರವವನ್ನೂ ಕೊಡುವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ದುಷ್ಟರಿಗೆ ತೊಂದರೆಯನ್ನೂ ನಾಶನವನ್ನೂ ತಪ್ಪಿತಸ್ಥರಿಗೆ ವಿಪತ್ತನ್ನೂ ಕಳುಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:3
21 ತಿಳಿವುಗಳ ಹೋಲಿಕೆ  

ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.


ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.


ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.


ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”


ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?


ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ.


ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.


ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು