Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಲ್ಲವೇ ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಲ್ಲ, ಅವನು ಸಾಯಲಿ ಎಂದು ನನ್ನ ಬಾಯಿ ಶಪಿಸಿಲ್ಲ ಅಂಥ ಪಾಪಕಟ್ಟಿಕೊಳ್ಳಲು ನನ್ನ ಮನ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವದಕ್ಕೆ ನಾನು ಒಪ್ಪಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ. ನಾನು ನನ್ನ ಬಾಯಿಂದ ಅಂಥ ಪಾಪಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:30
13 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.


ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು