Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನನ್ನ ಗುಡಾರದ ಆಳುಗಳು, ‘ನಮ್ಮ ಯಜಮಾನ ಬಡಿಸಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು’ ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:31
20 ತಿಳಿವುಗಳ ಹೋಲಿಕೆ  

ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.


ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.


ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.


ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?


ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.


ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.


ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.


ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.


ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.


ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.


ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು