Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:7
16 ತಿಳಿವುಗಳ ಹೋಲಿಕೆ  

ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.


“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.


ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.


ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು