Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋಬನ ಆ ಮೂವರು ಮಿತ್ರರ ಮೇಲೂ ಅವನು ಕೋಪಗೊಂಡನು. ಏಕೆಂದರೆ ಯೋಬನಿಗೆ ತಕ್ಕ ಉತ್ತರ ಕೊಡಲಾಗದೆ ದೇವರನ್ನೇ ತಪ್ಪಿತಸ್ಥರನ್ನಾಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದದರಿಂದ ಅವನು ಅವರ ಮೇಲೆಯೂ ಕೋಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:3
12 ತಿಳಿವುಗಳ ಹೋಲಿಕೆ  

ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.


ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?.”


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.


ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು