Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಸಂಕಟದಿಂದಲೂ ನಿತ್ಯವಾದ ಅಸ್ಥಿಪೀಡನದಿಂದಲೂ ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:19
18 ತಿಳಿವುಗಳ ಹೋಲಿಕೆ  

ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.


ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.


ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.


ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.


ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.


ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು