Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:3
15 ತಿಳಿವುಗಳ ಹೋಲಿಕೆ  

ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.


ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


“ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?


“ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?


ಆದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?


ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ.


ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.


ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.


ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು