Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:9
24 ತಿಳಿವುಗಳ ಹೋಲಿಕೆ  

ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?


‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.


ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.


ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.


ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.


ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.


ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.


ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ,


ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ.


“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು