Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಭೂಲೋಕವನು ಆತನ ವಶಕ್ಕೆ ಕೊಟ್ಟವನುಂಟೆ? ಆತನಲ್ಲದೆ ಭೂಮಂಡಲವನು ಕ್ರಮಪಡಿಸಿದವನುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾವನು? ಯಾವನು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:13
9 ತಿಳಿವುಗಳ ಹೋಲಿಕೆ  

ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು