Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಧರ್ಮಿಗಳು ಅಡಗಿಕೊಳ್ಳುವದಕ್ಕೆ ಅನುಕೂಲವಾದ ಯಾವ ಕತ್ತಲೂ ಯಾವ ಗಾಢಾಂಧಕಾರವೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:22
24 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.


ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.


ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?


ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.


ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.


ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು