Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:33
20 ತಿಳಿವುಗಳ ಹೋಲಿಕೆ  

ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.


ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.


ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.


ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.


ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?


ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ,


ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು