Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನ್ಯಾಯವೆಂದು ನೀನು ಊಹಿಸಿಕೊಂಡು ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:3
10 ತಿಳಿವುಗಳ ಹೋಲಿಕೆ  

‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.


ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವನು, ಸರ್ವಶಕ್ತನಾದ ದೇವರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?


ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.


ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.


ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.


ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು