Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನಾಂಗಗಳು ಇದ್ದಕ್ಕಿದ್ದಂತೆ ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:20
16 ತಿಳಿವುಗಳ ಹೋಲಿಕೆ  

ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.


ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.


ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.


ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು