Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಕ್ಕಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:21
18 ತಿಳಿವುಗಳ ಹೋಲಿಕೆ  

ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?


ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,


ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.


ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು