Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗ್ರಹಿಸುವವರಾರು ಮೇಘಗಳ ಹಬ್ಬುಗೆಯನು? ದೇವರ ಗುಡಾರದಲ್ಲಿನಾ ಗರ್ಜನೆಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹಾ, ಮೇಘಗಳ ಹಬ್ಬುಗೆಯನ್ನೂ ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಗ್ರಹಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:29
19 ತಿಳಿವುಗಳ ಹೋಲಿಕೆ  

ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.


ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,


ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”


ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.


ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು.


ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.


ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.


ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು