Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ಯೋಬನೇ, ಇದಕ್ಕೆ ಕಿವಿಗೊಡು; ಮೌನವಾಗಿ ನಿಂತು ದೇವರ ಅದ್ಭುತಗಳನ್ನು ಧ್ಯಾನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:14
14 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”


ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.


ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.


ದೇವರು ಇವುಗಳನ್ನು ನಿಯಂತ್ರಿಸಿ, ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?


ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?


ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು