Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರು ಇವುಗಳನ್ನು ನಿಯಂತ್ರಿಸಿ, ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರು ಹೇಗೆ ಮೋಡಗಳನು ನಿಯಂತ್ರಿಸುತ್ತಾನೆಂದು ಅರಿತಿರುವೆಯಾ? ಅವುಗಳಿಂದ ಸಿಡಿಲು ಹೇಗೆ ಹೊಳೆದುಬರುತ್ತದೆಂದು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರು ಇವುಗಳಿಗೆ ನಿಯಮಮಾಡಿ ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರು ಮೋಡಗಳಿಗೆ ಅಪ್ಪಣೆ ಕೊಡುವುದನ್ನು ಅರಿತಿರುವೆಯಾ? ದೇವರ ಮೇಘದ ಸಿಡಿಲು ಹೊಳೆಯುವುದನ್ನೂ ನೀನು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:15
9 ತಿಳಿವುಗಳ ಹೋಲಿಕೆ  

ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.


ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?


ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.


ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು