Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪತಾಳುತ್ತದೆ ಅದು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮುದ್ರೆ ಒತ್ತಿದ ಜೇಡಿಮಣ್ಣಿನಂತೆ [ಬೆಳಗಾಗುವಾಗ] ಭೂವಿುಯು ರೂಪಗಾಣುವವು. [ಎಲ್ಲಾ ವಸ್ತುಗಳು] ಮುಂಗೊಂಡು ಹೊದಿಕೆಯೋಪಾದಿಯಲ್ಲಿ ಕಾಣಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮುಂಜಾನೆಯ ಬೆಳಕು ಬೆಟ್ಟಗಳನ್ನೂ ಕಣಿವೆಗಳನ್ನೂ ಸ್ಪಷ್ಟವಾಗಿ ಕಾಣಮಾಡುತ್ತವೆ. ಹಗಲುಬೆಳಕು ಭೂಮಿಗೆ ಬಂದಾಗ ಆ ಸ್ಥಳಗಳ ರೂಪಗಳು ಮೇಲಂಗಿಯ ನೆರಿಗೆಗಳಂತೆ ಎದ್ದುಕಾಣುತ್ತವೆ. ಆ ಸ್ಥಳಗಳು ಮುದ್ರೆಯೊತ್ತಿದ ಜೇಡಿಮಣ್ಣಿನಂತೆ ರೂಪಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:14
4 ತಿಳಿವುಗಳ ಹೋಲಿಕೆ  

ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?


ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು