Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶೂರನ ಹಾಗೆ ನಡುವನ್ನು ಕಟ್ಟಿಕೋ, ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:3
13 ತಿಳಿವುಗಳ ಹೋಲಿಕೆ  

“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.


ದಯಮಾಡಿ ಕೇಳು, ನಾನೇ ಮಾತನಾಡುವೆನು; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು ಎಂದು ಅಪ್ಪಣೆಕೊಟ್ಟೆ.


ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.


ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು