Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು - ಇಗೋ, ಬಂದಿದ್ದೇವೆ ಎನ್ನುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; ತಮಗೇನಾಗಬೇಕು’ ಎನ್ನುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು, ‘ಇಗೋ, ನಾವು ಇಲ್ಲಿದ್ದೇವೆ,’ ಎಂದು ನಿನಗೆ ಹೇಳುತ್ತವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:35
13 ತಿಳಿವುಗಳ ಹೋಲಿಕೆ  

“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.


ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.


ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.


ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು