Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಮುದ್ರವು ಗರ್ಭವನ್ನು ಭೇದಿಸಿಕೊಂಡು ಬರಲು ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:8
13 ತಿಳಿವುಗಳ ಹೋಲಿಕೆ  

ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,


ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.


ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು


ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.


ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.


ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?


ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?


ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು