Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:17
9 ತಿಳಿವುಗಳ ಹೋಲಿಕೆ  

ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.


ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.


ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು