Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉದಯಾಸ್ತಮಾನಗಳ ಮಧ್ಯದಲ್ಲಿ [ಜೀವಿಸಿ] ಜಜ್ಜಲ್ಪಡುತ್ತಾರೆ, ಹೀಗೆ ನಿತ್ಯನಾಶನಹೊಂದುವದನ್ನು ಯಾರೂ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:20
14 ತಿಳಿವುಗಳ ಹೋಲಿಕೆ  

ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”


ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.


ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.


ನಾನು ಹಿಂದಿರುಗದ ದಾರಿಯನ್ನು, ಕೆಲವು ವರ್ಷಗಳೊಳಗೆ ಹಿಡಿಯುವೆನು.”


ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು